ಉಜ್ಬೇಕಿಸ್ತಾನ್: ಏಷ್ಯನ್ ವೇಟ್ ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಮಾಜಿ ವಿಶ್ವಚಾಂಪಿಯನ್ ಮೀರಾಬಾಯಿ ಚಾನು ದಾಖಲೆ ನಿರ್ಮಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ಗೆ ಅರ್ಹತೆ ಪಡೆದಿದ್ದಾರೆ.
ಆರು ಕಡ್ಡಾಯ ಅರ್ಹತಾ ಸ್ಪರ್ಧೆಗಳಲ್ಲಿ ಸ್ಪರ್ಧಿಸಿರುವ ಚಾನು ಟೋಕಿಯೊ ಒಲಿಂಪಿಕ್ ನಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಇನ್ನೊಂದೆಡೆ ಜೂನಿಯರ್ ವಿಶ್ವ ಚಾಂಪಿಯನ್‌ಶಿಪ್ ಕಂಚಿನ ಪದಕ ವಿಜೇತರಾದ ಜಿಲ್ಲಿಸ್ನ್ಯಾಚ್‌ನಲ್ಲಿ 69 ಕೆಜಿ ಮತ್ತು ಕ್ಲೀನ್ ಆಂಡ್ ಜರ್ಕ್ ನಲ್ಲಿ 88ಕೆಜಿ ಭಾರವನ್ನೆತ್ತುವ ಮೂಲಕ ಒಲಿಂಪಿಕ್ ಅರ್ಹತಾ ಸ್ಪರ್ಧೆಯ ಎಲ್ಲಾ ಮೂರು ವಿಭಾಗಗಳ ಚಿನ್ನದ ಹಂತದಲ್ಲಿ ಜಿಲ್ಲಿ ಉತ್ತೀರ್ಣರಾಗಿದ್ದಾರೆ.