ಬೆಳಗಾವಿಯಲ್ಲಿ (belagavi ) ಎಂಇಎಸ್ (mes ) ಪುಂಡರ ಗೂಂಡಾಗಿರಿ ಕುರಿತಂತೆ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ (boralingaya ) ಸ್ಪಷ್ಟನೆ ನೀಡಿದ್ದಾರೆ. ಪ್ರಕರಣದ ಸಂಬಂಧ ಒಂಬತ್ತು ಜನ ಆರೋಪಿಗಳನ್ನ ವಶಕ್ಕೆ ಪಡೆದಿದ್ದೇವೆ.
ಕಳೆದ ರಾತ್ರಿ ವಿಷಯ ಗೊತ್ತಾಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.ಮದುವೆ ಸಮಾರಂಭದಲ್ಲಿ ಕೆಲ ಕಿಡಿಗೇಡಿಗಳು ಗಲಾಟೆ ಮಾಡಿದ್ದಾರೆ. ಗಲಾಟೆಗೆ ಕಾರಣ ಎನೂ ಅನ್ನೋದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಹಿಂದೆ ಏನಾದ್ರೂ ದ್ವೇಷ ಇತ್ತಾ ಎಂಬ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಬೋರಲಿಂಗಯ್ಯ ತಿಳಿಸಿದ್ದಾರೆ. ಗ್ರಾಮದಲ್ಲಿ ಮಚ್ಚು ಲಾಂಗು ಹಿಡಿದು ಓಡಾಡ್ತಾರೆ ಎಂಬ ಆರೋಪ ಕುರಿತಂತೆ ಪ್ರತಿಕ್ರಿಯಿಸಿ ಆ ರೀತಿ ಎನಾದ್ರೂ ಕಂಡು ಬಂದ್ರೇ ಕೂಡಲೇ ಅವರನ್ನ ವಶಕ್ಕೆ ಪಡೆಯುತ್ತೇವೆ. ಸ್ಥಳದಲ್ಲಿ ಒಂದು ಸಿಎಆರ್ ತುಕಡಿ ನಿಯೋಜಿಸಿ ಬಿಗಿ ಭದ್ರತೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.ಮದುವೆ ಮೆರವಣಿಗೆ ಮೇಲೆ ಎಂಇಎಸ್ ಪುಂಡರು ಅಟ್ಟಹಾಸ ಮೆರೆದಿದ್ದರು. ಘಟನೆ ಖಂಡಿಸಿ ಕರವೇ ಹಾಗೂ ಕುಟುಂಬಸ್ಥರು ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಕರವೇ ಕುಟುಂಬಸ್ಥರು ಆಗ್ರಹಿಸಿದ್ರು. ಇದನ್ನೂ ಓದಿ :- ಬೆಳಗಾವಿಯ ನಿಪ್ಪಾಣಿಯಲ್ಲಿ ಭೀಕರ ರಸ್ತೆ ಅಪಘಾತ – ನಾಲ್ವರು ದುರ್ಮರಣ