ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್‌ಗಳ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆ ಕೂಡ ಕೂಡ ಹೆಚ್ಚಾಗುತ್ತಿದೆ. ಇದರಿಂದ ಮತ್ತೆ ಬೆಂಗಳೂರಿನಲ್ಲಿ ಲಾಕ್ ಡೌನ್ ಹೇರುವ ಭಯದಿಂದ ಬೆಂಗಳೂರಿನಲ್ಲಿ ಸಾವಿರಾರು ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.
ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಕಾರ್ಮಿಕರು, ಈಗ ಲಾಕ್‌ಡೌನ್ ಭಯದಿಂದ ತಮ್ಮ ತಮ್ಮ ಊರಿಗೆ ತೆರಳುತ್ತಿದ್ದಾರೆ. ಕೆಲವು ಮಂದಿ ಬೆಂಗಳೂರನ್ನೇ ಖಾಲಿ ಮಾಡಲು ಮುಂದಾಗಿದ್ದಾರೆ.
ಕಳೆದ ವರ್ಷ ಲಾಕ್‌ಡೌನ್ ಹೇರಿದ್ದ ವೇಳೆ ಸಾವಿರಾರು ಕಾರ್ಮಿಕರು ಉದ್ಯೋಗವಿಲ್ಲದೆ ಬೆಂಗಳೂರಲ್ಲಿ ಪರದಾಡಿದ್ದರು. ಅಲ್ಲದೆ, ತಮ್ಮ ಊರುಗಳನ್ನು ತಲುಪಲು ಪಟ್ಟಿದ್ದ ಕಷ್ಟ ಅಷ್ಟಿಷ್ಟಲ್ಲ. ಈ ಬಾರಿಯೂ ಕೊರೊನಾ ತನ್ನ ಆರ್ಭಟ ಮುಂದುವರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಕಾರ್ಮಿಕರೇ ತಮ್ಮ ರಾಜ್ಯಗಳತ್ತ ಮುಖಮಾಡುತ್ತಿದ್ದಾರೆ.