ರಾಯಚೂರು: ಕಾಂಗ್ರೆಸ್ ಪಕ್ಷ ಮುಳುಗುವ ಹಡಗು ಇದ್ದ ಹಾಗೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಭವಿಷ್ಯವಿಲ್ಲ. ಮುಳುಗುವ ಹಡಗಿಗೆ ಕ್ಯಾಪ್ಟನ್ ಡಿಕೆಶಿ ಆಗಿದ್ದಾರೆ ಎಂದು ಸಚಿವ ಬಿ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಮಸ್ಕಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಗೌಡ ಪಾಟೀಲ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು. ನಾವು ಅಭಿವೃದ್ಧಿ ಹಿನ್ನಲೆಯಲ್ಲಿ ಮತ ಕೇಳುತ್ತಿದ್ದು, ಮತದಾರರು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ಭರವಸೆ ನನಗೆಯಿದೆ. ಈ ಉಪ ಚುನಾವಣೆಯಲ್ಲಿ ರಾಜ್ಯದ ಮೂರು ಕ್ಷೇತ್ರಗಳಲ್ಲಿ ನೂರಕ್ಕೆ ನೂರರಷ್ಟು ನಮ್ಮ ಅಭ್ಯರ್ಥಿ ಬಿಜೆಪಿ ಗೆಲ್ಲಲಿದ್ದಾರೆ ಎಂದರು.
ಸಂಸದರು ಗುಲಾಮರಂತೆ ಎಂದು ಸಿದ್ದರಾಮಯ್ಯ ಹೇಳಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಿರಿಯರಾದ ಸಿದ್ದರಾಮಯ್ಯ ಈ ರೀತಿ ಮಾತನಾಡಬಾರದು. ಸೋಲಿನ ಹತಾಸೆಯಿಂದ ಏನೇನೊ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಸಿಡಿ ಕೇಸ್ ಎಸ್ಐಟಿ ತನಿಖೆ ಮಾಡುತ್ತಿದೆ. ಹೀಗಾಗಿ ಈ ವಿಷಯವನ್ನ ಹೆಚ್ಚಾಗಿ ಮಾತನಾಡುವುದಕ್ಕೆ ಹೋಗುವುದಿಲ್ಲ ಎಂದು ತಿಳಿಸಿದರು.