ರಾಜಧಾನಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ. ಗೋಪಾಲಯ್ಯನವರು ಇಂದು ಹುಟ್ಟು ಹಬ್ಬವನ್ನ ಆಚರಿಸಿಕೊಂಡರು.
ಹುಟ್ಟುಹಬ್ಬದ ಅಂಗವಾಗಿ ಬುಧವಾರ ಬೆಳಗ್ಗೆ 9 ಗಂಟೆಗೆ ಆದಿ ಚುಂಚನಗಿರಿ ಶ್ರೀ ಗಳಾದ ನಿರ್ಮಲಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಮಹಾಲಕ್ಷ್ಮಿಪುರಂನ ನಾಗಪುರ ವಾರ್ಡ್ ನಲ್ಲಿರುವ ಬಿ ಜಿ ಎಸ್ ಸ್ಕೂಲ್ ಆವರಣದಲ್ಲಿ ಕೋವಿಡ್ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕ್ಷೇತ್ರದ 2500 ಶಿಕ್ಷಕ ಹಾಗೂ ಶಿಕ್ಷಕಿಯರಿಗೆ ಆಹಾರದ ಕಿಟ್ ವಿತರಣೆ ಮಾಡಿದರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡರು.
ಕಾರ್ಯಕ್ರಮಕ್ಕೆ ಉಪ ಮುಖ್ಯ ಮಂತ್ರಿಗಳಾದ ಅಶ್ವಥ್ ನಾರಾಯಣ್ ರವರು ಹಾಗೂ ಮಾಜಿ ಉಪ ಸಭಾಪತಿ ಪುಟ್ಟಣ್ಣ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ಹುಟ್ಟಿದ್ದ ದಿನವನ್ನ ಈ ವರ್ಷ ಸಮಾಜಮುಖಿ ಕಾರ್ಯಗಳನ್ನ ಮಾಡುವ ಮೂಲಕ ಆಚರಿಸಿಕೊಂಡು ಸಂಕಷ್ಟದಲ್ಲಿದ್ದವರಿಗೆ ಸಹಾಯಕ ಮಾಡುವ ಮೂಲಕ ಆಶಾಕಿರಣವಾದರು.