ನಿಯಮ ಮೀರಿ ಮುಖ್ಯಮಂತ್ರಿಗಳು ತಮ್ಮ ಇಲಾಖೆಯ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿನ ಕೆ.ಎಸ್.ಈಶ್ವರಪ್ಪ ಲಿಖಿತ ದೂರು ನೀಡಿದ್ದಾರೆ.
ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಈಶ್ವರಪ್ಪ ಸಲ್ಲಿಸಿದ ಲಿಖಿತ ದೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಉಲ್ಲೇಖಿಸಿ ಪತ್ರ ಬರೆದಿರುವ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಆಡಳಿತದಲ್ಲಿ ಹಸ್ತಕ್ಷೇಪ ತಡೆಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
1200 ಕೋಟಿ ರೂ.ಗೂ ದೊಡ್ಡ ಮೊತ್ತದ ಯೋಜನೆಗಳಲ್ಲಿ ಯಡಿಯೂರಪ್ಪ ಹಸ್ತಕ್ಷೇಪ ಮಾಡುತ್ತಿದ್ದಾರೆ. ಅಲ್ಲದೇ ತಮ್ಮ ಗಮನಕ್ಕೆ ತಾರದೇ ಆರ್ಡಿಪಿಆರ್ ಇಲಾಖೆಯ ಅನುದಾನವನ್ನು ನೇರವಾಗಿ ಯಡಿಯೂರಪ್ಪ ಹಂಚಿಕೆ ಮಾಡಿದ್ದಾರೆ ಎಂದು ಈಶ್ವರಪ್ಪ ದೂರಿನಲ್ಲಿ ಆರೋಪಿಸಿದ್ದಾರೆ.