3 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಆಗುತ್ತಿರುವ ಆನೇಕಲ್ ಕಾಳೇನ ಅಗ್ರಹಾರ ಕೆರೆಯ ಅಭಿವೃದ್ಧಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (NIRMALA SITARAM ) ವೀಕ್ಷಣೆ ಮಾಡಿದ್ದಾರೆ.
7ಎಕರೆ 30 ಗುಂಟೆ ಜಾಗದಲ್ಲಿ ಇರುವ ಕೆರೆ ಇದ್ದಾಗಿದ್ದು, ಕೆರೆಯ ಅಭಿವೃದ್ಧಿಗಾಗಿ ಕೇಂದ್ರ ಸಚಿವರು 75 ಲಕ್ಷ ಹಣವನ್ನು ನೀಡಿದ್ದಾರೆ. ಕೆರೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆ ಶಾಸಕ ಎಂ ಕೃಷ್ಣಪ್ಪ ಜೊತೆ ಭೇಟಿ ನೀಡಿದ್ದಾರೆ. ಕೆರೆ ಅಭಿವೃದ್ಧಿ ಕಾಮಗಾರಿಗೆ ಬಗ್ಗೆ ಬಿಬಿಎಂಪಿ ಹಾಗೂ ಬಿಡಬ್ಲ್ಯೂಎಸ್ಎಸ್ಬಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದಿದ್ದು, ಅಭಿವೃದ್ಧಿ ಕಾಮಗಾರಿಗೆ ಬಗ್ಗೆ ಕೇಂದ್ರ ಸಚಿವೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ : – ಕಾಶ್ಮೀರಿ ಪಂಡಿತರ ಹತ್ಯೆಗಿಂತ ಸಿನಿಮಾ ಬಗ್ಗೆ ಮಾತಾಡೋದು ಪ್ರಧಾನಿಗೆ ಮುಖ್ಯವಾಗಿದೆ – ರಾಹುಲ್