ಬೆಂಗಳೂರು : ಕೋವಿಡ್ ನಿಯಂತ್ರಣಕ್ಕಾಗಿ ಸಚಿವರ 1 ವರ್ಷದ ಸಂಬಳ ಹಾಗೂ ಶಾಸಕರ 1 ತಿಂಗಳ ಸಂಬಳ ನೀಡಲು ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ, ಲಸಿಕೆ ಹಾಗೂ ಆಕ್ಸಿಜನ್ ವ್ಯವಸ್ಥೆಗಳ ನಿರ್ವಹಣೆಗೂ ಕೂಡ ಯಾವೆಲ್ಲ ರೀತಿಯ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಇದೇ ವೇಳೆ 230 ಎಕರೆ ಜಮೀನುಗಳನ್ನು ಸ್ಮಶಾನಕ್ಕಾಗಿ ಬಳಸಿಕೊಳ್ಳಲು ತುರ್ತು ಆದೇಶ ಹೊರಡಿಸಲಾಗಿದ್ದು, ಕೋವಿಡ್ ರೋಗಿಗಳ ಶವಸಂಸ್ಕಾರಕ್ಕೆ ಇದ್ದ ಅಡೆತಡೆಗಳನ್ನು ಕಂದಾಯ ಇಲಾಖೆಯಿಂದ ಬಗೆಹರಿಸಲಾಗಿದೆ ಎಂದು ತಿಳಿಸಿದರು.