ಬೆಂಗಳೂರು : ಎರಡು ವರ್ಷದಿಂದ ನಾಯಕತ್ವ ಬದಲಾವಣೆ ವಿಚಾರ ಚರ್ಚೆಯಾಗುತ್ತಲೇ ಇದೆ. ಈ ರೀತಿ ಮಾತನಾಡುವುದು ಕೆಲವರಿಗೆ ಚಟ ಎಂದು ಸಚಿವ ಸಿ ಪಿ ಯೋಗೇಶ್ವರ್ ವಿರುದ್ಧ ಸಚಿವ ಆರ್ ಅಶೋಕ್ ವಾಗ್ದಾಳಿ ನಡೆಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಸಚಿವರು, ನಾನು 40 ವರ್ಷದಿಂದ ಕಾಲ ಬಿ ಎಸ್ ಯಡಿಯೂರಪ್ಪನವರ ಜೊತೆ ನಾನು ಕೆಲಸ ಮಾಡಿದ್ದೇನೆ. ಪದೇ ಪದೇ ಈ ರೀತಿ ಮಾತನಾಡುವುದರಿಂದ ಯಡಿಯೂರಪ್ಪನವರ ವರ್ಚಸ್ಸಿಗೆ ಯಾವುದೇ ದಕ್ಕೆಯಾಗುವುದಿಲ್ಲ ಎಂದು ತಿಳಿಸಿದರು.
ಮತ್ತೆ ಯಡಿಯೂರಪ್ಪ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ, ಈ ಅವಧಿಯನ್ನು ಯಡಿಯೂರಪ್ಪ ನೇತೃತ್ವದಲ್ಲಿ ಪೂರ್ಣಗೊಳಿಸುತ್ತೇವೆ. ಕೆಲವರಿಗೆ ಈ ರೀತಿ ಮಾತನಾಡುವುದು ತಿಂದ ಅನ್ನ ಜೀರ್ಣ ಅಗುವುದಿಲ್ಲ ಈ ರೀತಿ ಮಾತನಾಡುವುದು ಅವರಿಗೂ ಒಳ್ಳೆಯದಲ್ಲ, ಪಕ್ಷಕ್ಕೂ ಒಳ್ಳೆಯದಲ್ಲ ಎಂದು ಕಿಡಿಕಾರಿದರು.
ಇನ್ನೂ ಈ ವೇಳೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತಾನಾಡಿ 30-40 ವರ್ಷದ ಹೋರಾಟ, ಕಾರ್ಯಕರ್ತರ ಪರಿಶ್ರಮದಿಂದ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾರೆ. ಅವರ ಅನುಭವದ ಮುಂದೆ ನಮ್ಮದೂ ಏನು ಇಲ್ಲ. ರಾಜಕೀಯ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ ಎಂದು ಪರೋಕ್ಷವಾಗಿ ಸಚಿವ ಯೋಗೇಶ್ವರ್ ವಿರುದ್ದ ವಾಗ್ದಾಳಿ ನಡೆಸಿದರು.