ಬೆಳಗಾವಿ: ಮತ್ತೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮೈಂಡ್ ಔಟ್ ಆಗಿದೆ ಅವರನ್ನು ಇನ್ನೂ ಮುಂದೆ ಬಸ್ ಸ್ಟಾಂಡ್ನಲ್ಲಿ ಹುಡುಕಬೇಕು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ತಮ್ಮ ನಾಲಿಗೆ ಹರಿಬಿಟ್ಟಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಮತ್ತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮೈಂಡ್ ಔಟ್ ಆಗಿದ್ದು , ಲಕ್ಷ್ಮೀ ಹೆಬ್ಬಾಳ್ಕರ್ ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಸ್ವಾಗತಿಸುತ್ತೇನೆ, ಅವರಿಗೆ ಮೈಂಡ್ ಔಟ್ ಆಗಿದೆ ಅವರಿಗೆ ಹೆಚ್ಚು ಮಹತ್ವ ನೀಡುವುದು ಬೇಡ ಎಂದರು.
5 ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರುವ ವಿಚಾರವಾಗಿ ಮಾತನಾಡಿದ ಅವರು, ಯಾರು ಆ ಕಾಂಗ್ರೆಸ್ ಶಾಸಕರು ಎಂಬುವುದರ ಬಗ್ಗೆ ಈಗಲೇ ಅವರ ಹೆಸರು ಬಹಿರಂಗಪಡಿಸುವದಿಲ್ಲ. ಇನ್ನು ಬೆಳಗಾವಿ ಲೋಕಸಭಾ ಟಿಕೆಟ್ ದಿವಗಂತ ಸುರೇಶ್ ಅಂಗಡಿ ಕುಟುಂಬಕ್ಕೆ ನೀಡಲು ಮನವಿ ಮಾಡಿದ್ದೇನೆ, ಹೈಕಮಾಂಡ್ ಯಾರಿಗೂ ಟಿಕೆಟ್ ನೀಡಿದರೂ ಬೆಂಬಲಿಸುತ್ತೇನೆ ಎಂದು ತಿಳಿಸಿದರು.
ಗೋಕಾಕ್ ಮತಕ್ಷೇತ್ರದ ಪರಾಭವ ಅಭ್ಯರ್ಥಿ ಅಶೋಕ್ ಪೂಜಾರಿ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ್ದರ ವಿಚಾರ ಮಾತನಾಡಿ ಕಾಂಗ್ರೆಸ್ ಬಗ್ಗೆ ನನಗೆ ಪ್ರಶ್ನೆ ಮಾಡಬೇಡಿ, ಯಾರೂ ಬಂದರೂ ನನಗೆ ಚಿಂತೆ ಇಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರು ಮಾತನಾಡಿದ್ದಾರೆ..