ಭಾರತ ಮಹಿಳಾ ಕ್ರಿಕೆಟ್ ತಂಡ ಅನುಭವಿ ಬ್ಯಾಟರ್ ಹಾಗೂ ವಿಶ್ವ ಕ್ರಿಕೆಟ್ನ ದಿಗ್ಗಜ ಆಟಗಾರ್ತಿ ಮಿಥಾಲಿ ರಾಜ್ ( MITHALI RAJ ) ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.
ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳ ಮೂಲಕ ಮಿಥಾಲಿ ತಮ್ಮ ನಿವೃತ್ತಿ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ಗ ಳ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮಿಥಾಲಿರಾಜ್. 1999-2022ರವರೆಗೆ ಭಾರತ ಪರ ಆಡಿದ 37 ವರ್ಷದ ಮಿಥಾಲಿ ರಾಜ್ ಇದೀಗ ದಿಢೀರ್ ನಿವೃತ್ತಿ ಘೋಷಿಸಿರೋದು ಅಭಿಮಾನಿಗಳಲ್ಲಿ ಅಚ್ಚರಿ ಹುಟ್ಟಿಸಿದೆ.
ನಾನು ಕ್ರಿಕೆಟ್ ವೃತ್ತಿಜೀವನದಿಂದ ನಿವೃತ್ತಿಯಾಗಲು ಇದು ಸರಿಯಾದ ಸಮಯವೆಂದು ನನಗನಿಸುತ್ತಿದೆ. ನಮ್ಮ ತಂಡವು ಉತ್ತಮ ಪ್ರತಿಭಾನ್ವಿತ ಆಟಗಾರ್ತಿರನ್ನೊಳಗೊಂಡಿದ್ದು, ಭಾರತ ಮಹಿಳಾ ಕ್ರಿಕೆಟ್ ತಂಡದ ಭವಿಷ್ಯ ಮತ್ತಷ್ಟು ಉಜ್ವಲವಾಗಿರಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಮ್ಮ ನಿವೃತ್ತಿಯ ನಿರ್ಧಾರವನ್ನು ಟ್ವೀಟ್ ಮೂಲಕ ಜಗತ್ತಿನ ಮುಂದೆ ಅನಾವರಣ ಮಾಡಿರುವ ಮಿಥಾಲಿ ರಾಜ್, ಕಳೆದ ಹಲವು ವರ್ಷಗಳಿಂದ ನನಗೆ ಪ್ರೀತಿ ಹಾಗೂ ಬೆಂಬಲ ನೀಡಿದ ನಿಮಗೆಲ್ಲರಿಗೂ ಅನಂತ ಧನ್ಯವಾದಗಳು. ನಿಮ್ಮೆಲ್ಲರ ಹಾರೈಕೆ ಹಾಗೂ ಬೆಂಬಲದೊಂದಿಗೆ ನಾನು ಎರಡನೇ ಇನಿಂಗ್ಸ್ನತ್ತ ಮುಖ ಮಾಡುತ್ತಿದ್ದೇನೆ ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.
ಭಾರತ ಮಹಿಳಾ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ತಂಡದ ನಾಯಕಿಯಾಗಿದ್ದ ಮಿಥಾಲಿ ರಾಜ್, 1999ರಲ್ಲಿ ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಇದಾದ ಬಳಿಕ ದಶಕಗಳ ಕಾಲ ಕ್ರಿಕೆಟ್ ಆಡುವ ಮೂಲಕ ಕೋಟ್ಯಾಂತರ ಮಹಿಳೆಯರ ಪಾಲಿಗೆ ಮಿಥಾಲಿ ರಾಜ್ ಸ್ಪೂರ್ತಿಯ ಚಿಲುಮೆ. ಭಾರತ ಮಹಿಳಾ ತಂಡದ ನಾಯಕಿಯಾಗಿ ಮಿಥಾಲಿ ರಾಜ್ ಎರಡು ಬಾರಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ಫೈನಲ್ಗೇರಿಸಿದ್ದರು. ಇದನ್ನೂ ಓದಿ : – ದಕ್ಷಿಣ ಭಾರತದಲ್ಲಿ ಚಿಗುರೊಡೆದ ಬಾಕ್ಸಿಂಗ್ – ಹೆಮ್ಮೆಯ ಸಾಧಕಿ ನಿಖತ್ ಝರೀನ್
ಮಿಥಾಲಿ ರಾಜ್ ಭಾರತ ಮಹಿಳಾ ತಂಡದ ಪರ 232 ಏಕದಿನ ಪಂದ್ಯಗಳನ್ನಾಡಿ 50.68ರ ಬ್ಯಾಟಿಂಗ್ ಸರಾಸರಿಯಲ್ಲಿ 7,805 ರನ್ ಬಾರಿಸಿದ್ದಾರೆ. ಇನ್ನು 89 ಟಿ20 ಪಂದ್ಯಗಳಿಂದ ಮಿಥಾಲಿ ರಾಜ್ 2,364 ರನ್ ಸಿಡಿಸಿದ್ದರು. ಭಾರತ ಪರ 12 ಟೆಸ್ಟ್ ಪಂದ್ಯಗಳನ್ನಾಡಿ 699 ರನ್ ಬಾರಿಸಿದ್ದರು. ಎರಡು ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿಜೀವನದಲ್ಲಿ ಮಿಥಾಲಿ 7 ಏಕದಿನ ಹಾಗೂ ಒಂದು ಟೆಸ್ಟ್ ಶತಕ ಸಿಡಿಸಿದ್ದಾರೆ.
ಇದನ್ನೂ ಓದಿ : – ಸೌರವ್ ಗಂಗೂಲಿ ರಾಜಿನಾಮೆ ವದಂತಿ – ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟನೆ