ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಅಪಸ್ವರ ಎತ್ತಿದ್ದ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಗುಡುಗಿದ್ದಾರೆ.
ಕೊರೊನಾ ಸಂದರ್ಭದಲ್ಲಿ ಕೆಲವರು ದೆಹಲಿಗೆ ಹೋಗಿದ್ದಾರೆ. ಅವರು ದೆಹಲಿಗೆ ಹೋಗಿ ಏನೇನೋ ಮಾಡುವುದು ಸರಿಯಲ್ಲ ಎಂದು ಎಂ ಪಿ ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಯಾರೋ ಒಂದಿಬ್ಬರು ಮುಖ್ಯಮಂತ್ರಿಗಳ ವಿರುದ್ಧ ಅಪಪ್ರಚಾರ ಮಾಡಿದ್ರೆ ಏನು ಆಗುವುದಿಲ್ಲ. ಚುನಾವಣೆಯಲ್ಲಿ ಸೋತವರು ಭಿಕ್ಷೆ ಬೇಡಿ ಮಂತ್ರಿಯಾಗಿದ್ದಾರೆ. ನಾವೆಲ್ಲಾ ಸಿಎಂ ಯಡಿಯೂರಪ್ಪ ಅವರ ಜೊತೆಗಿದ್ದೇವೆ. ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.