ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಪ್ರೇಮ್ ಸಿಂಗ್ ( pream singh ) ಎಂಬ ಯುವಕನಿಗೆ ಚಾಕು ಇರಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಗುಂಡು ಹಾರಿಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಈಗಾಗಲೇ ಇಬ್ಬರನ್ನು ಬಂಧಿಸಿದ್ದ ಪೊಲೀಸರು ಮತ್ತೋರ್ವನನ್ನ ಬಂಧಿಸಿದ್ದಾರೆ. ಶಿವಮೊಗ್ಗದ ಮಾರ್ನಾಮಿಬೈಲ್ನ ನಿವಾಸಿ ಮೊಹಮ್ಮದ್ ಜಬೀವುಲ್ಲಾನನ್ನು ಪೊಲೀಸರು ನಸುಕಿನ ಜಾವ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರ ಮೇಲೆ ಚಾಕುವಿನಿಂದ ಜಬೀವುಲ್ಲಾ ಹಲ್ಲೆ ಮಾಡಲು ಯತ್ನಿಸಿದ ವೇಳೆ ಪೊಲೀಸರು ಕಾಲಿಗೆ ಗುಂಡೇಟು ತಗುಲಿಸಿ ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರೇಮ್ ಸಿಂಗ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಬಳಿಕ ಮಾತನಾಡಿದ ಅರಗ ಜ್ಞಾನೇಂದ್ರ ಗಾಯಾಳು ಪ್ರೇಮ್ ಸಿಂಗ್ ಭೇಟಿ ಮಾಡಿ ಬಂದಿದ್ದೇನೆ. ಜೀವಕ್ಕೆ ತೊಂದರೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ. ಘಟನೆಗೆ ಕಾರಣರಾದವರು ಎಲ್ಲೇ ಇದ್ದರೂ ಅವರನ್ನು ಹುಡುಕಿ ಮಟ್ಟ ಹಾಕುತ್ತೇವೆ. ಇಂತವರನ್ನು ಮಟ್ಟಹಾಕುವ ಕೆಲಸ ಪೊಲೀಸರು ಮಾಡುತ್ತಾರೆ ಎಂದು ತಿಳಿಸಿದರು.
ಇದನ್ನೂ ಓದಿ : – ಬೊಮ್ಮಾಯಿ ಈ ಸರ್ಕಾರ ಸರಿಯಾಗಿ ನಡೆಸ್ತಿದ್ದಾರಾ…? ಸಿದ್ದರಾಮಯ್ಯ ಪ್ರಶ್ನೆ