ಬೇಸಿಗೆ ಬಿರು ಬಿಸಿಲಿನ ನಡುವೆ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಕಾರಣದಿಂದ ಮೇ 6 ರಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿರುವುದಾಗಿ ಸೂಚನೆ ನೀಡಲಾಗಿದೆ.
ಇಂದು ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉಂಟಾಗುವ ಸಾಧ್ಯತೆಯಿರುವುದರಿಂದ ಮೇ 6 ರಿಂದ ಕಡಿಮೆ ಒತ್ತಡ ಪರಿಸ್ಥಿತಿವೇರ್ಪಟ್ಟಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ :- ಪಿಎಸ್ಐ ಪರೀಕ್ಷೆ ಅಕ್ರಮವನ್ನು ಪೊಲೀಸರೇ ಹೊರತಂದಿದ್ದಾರೆ – ಹೆಚ್.ಡಿ ಕುಮಾರಸ್ವಾಮಿ