ಅಮರನಾಥ ದರ್ಶನಕ್ಕೆ ತೆರಳಿದ ಬೆಳಗಾವಿಯ 60ಕ್ಕೂ ಹೆಚ್ಚು ಭಕ್ತರು ಸೇಫ್

ಜಮ್ಮು ಕಾಶ್ಮೀರದ ಪವಿತ್ರ ಯಾತ್ರಾ ಸ್ಥಳ ಅಮರನಾಥ (amranath ) ದರ್ಶನಕ್ಕೆ ತೆರಳಿದ ಬೆಳಗಾವಿ(belgavi) ಯ 60 ಕ್ಕೂ ಹೆಚ್ಚು ಜನರು ಶೇಷನಾಗ ಎಂಬ ಪ್ರದೇಶದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ಶಿವಾಜಿ ನಗರ, ಕಾಮತಗಲ್ಲಿ ಸೇರಿದಂತೆ ವಿವಿಧ ಕಡೆಗಳಿಂದ ಸುಮಾರು 60 ಜನ ಅಮರನಾಥ ಯಾತ್ರೆಗೆ ಭಕ್ತರು ಪ್ರವಾಸ ಕೈಗೊಂಡಿದ್ದರು. ಆದರೆ ಅಮರನಾಥ ಪರ್ವತದಲ್ಲಿ ಮೇಘ ಸ್ಫೋಟ ಆಗಿ ದುರ್ಘಟನೆ ಸಂಭವಿಸಿದ್ದರಿಂದ ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿತು. ಇದನ್ನೂ ಓದಿ : –  ಆಗುಂಬೆ ಘಾಟಿಯಲ್ಲಿ ಭೂಕುಸಿತ – ಕುದುರೆಮುಖ-ಕಾರ್ಕಳ ರಸ್ತೆ ಸಂಚಾರ ಅಸ್ತವ್ಯಸ್ತ

ಸದ್ಯ ದರ್ಶನಕ್ಕೆ ತೆರಳಿದ್ದ ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯ ಶಿವಾಜಿ ಮಂಡೋಳಕರ ತಂಡದಲ್ಲಿ 32 ಜನರಿದ್ದು, ಅದನ್ನು ಹೊರತುಪಡಿಸಿ 20ಕ್ಕೂ ಹೆಚ್ಚು ಬೆಳಗಾವಿಗರು ದರ್ಶನ ಪಡೆದುಕೊಂಡು ವಾಪಸ್ ಬರುವಾಗ ಮೇಘ ಸ್ಟೋಟದಿಂದ ಅಮರನಾಥ ದೇವಸ್ಥಾನದಿಂದ 20ಕಿ.ಮೀ. ದೂರದಲ್ಲಿರುವ ಶೇಷನಾಗ ಎಂಬ ಪ್ರದೇಶದಲ್ಲಿ ಸುರಕ್ಷಿತವಾಗಿದ್ದಾರೆ.

ಇದನ್ನೂ ಓದಿ : – ಕೆ.ಆರ್.ಎಸ್. ಅಣೆಕಟ್ಟೆ ಭರ್ತಿಗೆ ಕ್ಷಣ ಗಣನೆ – ಮೈದುಂಬಿ ಹರಿಯುತ್ತಿದೆ ಗೋಕಾಕ್ ಫಾಲ್ಸ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!