ಅತಿಯಾದ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ದೋಣಿ ಮುಳುಗಿದ ಪರಿಣಾಮ 70ಕ್ಕೂ ಅಧಿಕ ಮಂದಿ ಮೃತಪಟ್ಟ ದಾರುಣ ಘಟನೆ ನೈಜಿರಿಯಾದಲ್ಲಿ ಸಂಭವಿಸಿದೆ.
ಕೆಬ್ಬಿ ನಗರದಲ್ಲಿ 165 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿದ್ದು, 76 ದೇಹಗಳು ಇದುವರೆಗೆ ಪತ್ತೆಯಾಗಿದ್ದು, 22 ಮಂದಿಯನ್ನು ರಕ್ಷಿಸಲಾಗಿದೆ. ಮುಳುಗು ತಜ್ಞರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳು ಕೂಡ ಸೇರಿದ್ದಾರೆ. ದೋಣಿಯಲ್ಲಿ ಗರಿಷ್ಠ 100 ಜನರು ಪ್ರಯಾಣಿಸಬಹುದಾಗಿತ್ತು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.