ಕಪಾಳಮೋಕ್ಷ ಮಾಡಿದ ಅತ್ತೆಯ ಮೇಲೆ ಅತ್ಯಾಚಾರ…

ಮೀರತ್ . ಸೋದರಳಿಯನೇ ತನ್ನ ಅತ್ತೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಮೀರತ್ ಜಿಲ್ಲೆಯ ಜಾನಿ ಪ್ರದೇಶದಲ್ಲಿ ನಡೆದಿದೆ.
ಅಡುಗೆ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಅತ್ತೆಯ ಮೇಲೆ ಕಾಮುಕ ಅಳಿಯ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಇದರಿಂದ ಕೋಪಗೊಂಡ ಮಹಿಳೆ ಅಳಿಯನ ಕೆನ್ನೆಗೆ ಬಾರಿಸಿದ್ದಾಳೆ. ಆದರೂ ಕಾಮುಕ ಅಳಿಯ ತನ್ನ ಅತ್ತೆಯ ಮೇಲೆ ಎರಗಿ ಅತ್ಯಾಚಾರವೆಸಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಆರೋಪಿ ಸಿಕ್ಕಿಹಾಕಿಕೊಂಡಿದ್ದು. ಅಲ್ಲದೇ ತಾನು ಮಾಡಿರುವ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.