![](https://rajnewskannada.in/wp-content/uploads/2021/04/dhoni.jpg)
ಮಹೇಂದ್ರಸಿಂಗ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಟಿ-20 ಟೂರ್ನಿಯ ಮೊದಲ ಪಂದ್ಯದಲ್ಲೇ ಸೋತಿದ್ದೂ ಅಲ್ಲದೇ ನಿಧಾನಗತಿ ಬೌಲಿಂಗ್ ಗಾಗಿ ದಂಡ ತೆರಬೇಕಾಗಿದೆ.
ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕಾಗಿ ಚೆನ್ನೈ ಸೂಪರ್ ಕಿಂಗ್ಸ್ ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಮೂರು ಬಾರಿಯ ಚಾಂಪಿಯನ್ ಆಗಿರುವ ಚೆನ್ನೈ ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯದಲ್ಲೇ 7 ವಿಕೆಟ್ ಸೋಲುಂಡಿತ್ತು. ಮೊದಲು ಬ್ಯಾಟ್ ಮಾಡಿದ ಧೋನಿ ಪಡೆ 7 ವಿಕೆಟ್ ಗೆ 189 ರನ್ ಗಳಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ಶಿಖರ್ ಧವನ್ ಮತ್ತು ಪೃಥ್ವಿ ಶಾ ಅವರ ಸಿಡಿಲಬ್ಬರದ ಅರ್ಧಶತಕಗಳ ನೆರವಿನಿಂದ 18.4 ಓವರ್ ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. 7 ವಿಕೆಟ್ ಗಳಿಂದ ಸೋಲುಂಡ ಚೆನ್ನೈ ಮೊದಲ ಪಂದ್ಯದಲ್ಲೇ ಗೆಲುವಿನ ಖಾತೆ ತೆರೆಯಲು ವಿಫಲವಾಯಿತು.