ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತಂದೆ ಮತ್ತು ತಾಯಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖಿತರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.
ಧೋನಿ ಅವರ ತಾಯಿ ದೇವಕಿ ದೇವಿ ಮತ್ತು ತಂದೆ ಪಾನ್ ಸಿಂಗ್ ಅವರಿಗೆ ಕೊರೊನಾ ನೆಗೆಟಿವ್ ಬಂದಿದ್ದು, ಯಾವುದೇ ಅನಾರೋಗ್ಯದ ಸಮಸ್ಯೆ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದು, ಬುಧವಾರ ಡಿಸ್ಚಾರ್ಜ್ ಮಾಡಿದರು.
ಏಪ್ರಿಲ್ 20ರಂದು ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಧೋನಿ ಹೆತ್ತವರನ್ನು ರಾಂಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ರಾತ್ರಿ ಇಬ್ಬರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ವ್ಹೀಲ್ ಚೇರ್ ನಲ್ಲಿ ಹೊರ ಬರುತ್ತಿರುವ ಫೋಟೋವನ್ನು ಧೋನಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.