ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಹೀಗಾಗಿ ಸರ್ಕಾರ ಕಠಿಣ ನಿಯಮಗಳನ್ನು ಹೇರುತ್ತಿದೆ. ಅಲ್ಲದೇ ಬೇರೆ ರಾಜ್ಯ ಮತ್ತು ದೇಶಗಳಿಂದ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಕೋವಿಡ್ 19 ಆರ್ಟಿಪಿಸಿಆರ್ ಪರೀಕ್ಷೆಯನ್ನು ಮಾಡಲಾಗುತ್ತಿದೆ.
ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರ್ಟಿಪಿಸಿಆರ್ ಪರೀಕ್ಷಾ ಶುಲ್ಕವನ್ನು ಇಳಿಕೆ ಮಾಡಲಾಗಿದೆ. ಈ ಮೂಲಕ ಪ್ರಯಾಣಿಕರು ಇನ್ನುಮುಂದೆ ಆರ್ಟಿಪಿಸಿಆರ್ ಪರೀಕ್ಷೆಗೆ 850ರೂ. ಬದಲಿಗೆ 600ರೂ. ನೀಡಿದರೆ ಸಾಕು.
ಕಳೆದ ಸಪ್ಟೆಂಬರ್ನಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿ ಆರ್ಟಿಪಿಸಿಆರ್ ಪರೀಕ್ಷಾ ಕೌಂಟರ್ಗಳನ್ನು ಸ್ಥಾಪಿಸಿತ್ತು. ಇದುವರೆಗೂ ಮೂರು ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದೆ.