ಮುಂಬೈ: ಮುಂಬೈನಲ್ಲಿ 2006ರಲ್ಲಿ ನಡೆದ ಸರಣಿ ಬಾಂಬ್ ಸ್ಪೋಟದ ಆರೋಪಿ ಕಮಲ್ ಅಹಮ್ಮದ್ ಅನ್ಸಾರಿ ಕೋವಿಡ್ಗೆ ಬಲಿಯಾಗಿದ್ದಾರೆ.
ಮಹಾರಾಷ್ಟ್ರದ ನಾಗಪುರದ ಸೆಂಟ್ರಲ್ ಜೈಲ್ನಲ್ಲಿ ಇದ್ದ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಸೇರಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನ ಹೊಂದಿದ್ದಾರೆ ಎಂದು ಜೈಲಿನ ಸುಪರಿಡೆಂಟೆಂಡ್ ಅನೂಪ್ ಕುಮಾರ್ ತಿಳಿಸಿದ್ದಾರೆ.