ಬೀದರ್ ನಗರಸಭೆ ಚುನಾವಣೆ ಮುಂದೂಡಿ: ಸಿಎಂಗೆ ಬಂಡೆಪ್ಪ ಕಾಶಂಪೂರ ಮನವಿ

ಬೀದರ್ : ಬೀದರ್ ನಗರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬೀದರ್ ನಗರ ಸಭೆ ಚುನಾವಣೆಯನ್ನು ಮುಂದೂಡುವಂತೆ ಸಿಎಂ ಬಿ.ಎಸ್ ಯಡಿಯೂರಪ್ಪರವರಿಗೆ ಜೆಡಿಎಸ್ ಶಾಸಕ ಬಂಡೆಪ್ಪ ಕಾಶಂಪೂರ ಮನವಿ ಮಾಡಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ಸಂಬಂಧ ತಾವು ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದ್ದಿರಿ. ಆ ಜಿಲ್ಲೆಗಳ ಪೈಕಿ ಬೀದರ್ ನಗರವು ಒಂದಾಗಿದ್ದು. ಕೊರೋನಾ ಮೊದಲನೇಯ ಅಲೆಗೆ ಹೋಲಿಕೆ ಮಾಡಿದರೆ ಬೀದರ್ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ ಪ್ರತಿದಿನ 250ಕ್ಕೂ ಹೆಚ್ಚಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ.

ಬೀದರ್ ಜಿಲ್ಲೆಯೂ ಮಹಾರಾಷ್ಟ್ರ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿದ್ದು, ಮಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ನಮ್ಮ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ನಗರ ಸಭೆ ಚುನಾವಣೆ ನಡೆಸುವುದು ಸೂಕ್ತವೆನಿಸುತ್ತಿಲ್ಲ.

ಸಾರ್ವಜನಿಕರ ಹಿತದೃಷ್ಠಿಯಿಂದ ನಗರ ಸಭೆ ಚುನಾವಣೆಯನ್ನು ಮುಂದೂಡಬೇಕೆಂದು ಪತ್ರದ ಮೂಲಕ ಸಿಎಂ ಯಡಿಯೂರಪ್ಪನವರಿಗೆ ಶಾಸಕ ಬಂಡೆಪ್ಪ ಕಾಶಂಪೂರ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!