ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಬಂಡಾಯ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಮುಖಂಡರು ಇದೀಗ ಮನವೊಲಿಕೆ ಪ್ರಯತ್ನ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಕೆ.ಎಚ್. ಮುನಿಯಪ್ಪ (KH.Muniyappa) ಅವರ ಸಂಜಯನಗರ ನಿವಾಸಕ್ಕೆ ಭೇಟಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (Dk . shivkumar) ಹಾಗೂ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಮಾತುಕತೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಕೆ. ಪಾಟೀಲ್ (HK. patil) ಕೂಡಾ ಉಪಸ್ಥಿತರಿದ್ದರು. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಜೊತೆಗೆ ಅಸಮಾಧಾನದಿಂದ ಬಂಡಾಯದ ಬಾವುಟ ಹಾರಿಸಿದ್ದ ಮುನಿಯಪ್ಪ, ಹೈಕಮಾಂಡ್ ಗೆ ಒಂದು ತಿಂಗಳ ಗಡುವು ನೀಡಿದ್ದರು. ಕೊತ್ನೂರು ಮಂಜು ಹಾಗೂ ಚಿಂತಾಮಣಿ ಸುಧಾಕರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿರುವುದು ಮುನಿಯಪ್ಪ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಇದನ್ನು ಓದಿ :- ಕರಾವಳಿ ಭಾಗದಲ್ಲಿ ಮುಂದುವರಿದ ಧಾರಾಕಾರ ಮಳೆ- ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ
ಈ ಹಿನ್ನೆಲೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಮುನಿಯಪ್ಪ ರಮೇಶ್ ಕುಮಾರ್ (Ramesh kumar) ವಿರುದ್ಧ ಹರಿಹಾಯ್ದರಲ್ಲದೆ, ಪಕ್ಷದ ನಾಯಕತ್ವದ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದರು. ದೇವೇಗೌಡರ ಪರವಾಗಿ ಮಾತನಾಡುವ ಮೂಲಕ ಮುನಿಯಪ್ಪ ಕುತೂಹಲ ಕೆರಳಿಸಿದ್ದರು. ಪಕ್ಷ ತೊರೆಯುವ ನಿರ್ಧಾರವನ್ನು ಬಹಿರಂಗವಾಗಿ ಪ್ರಕಟ ಮಾಡದೆ ಇದ್ದರೂ ಕಾರ್ಯಕರ್ತರ ಜೊತೆಗೆ ಚರ್ಚೆ ನಡೆಸಿ ಮುಂದಿನ ಹೆಜ್ಜೆ ಇಡುವುದಾಗಿ ಪರೋಕ್ಷ ಎಚ್ಚರಿಕೆಯನ್ನು ನೀಡಿದ್ದರು.
ಮುನಿಯಪ್ಪ ಬಂಡಾಯ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ (BK.Hariprasad) ಹಾಗೂ ಎಚ್.ಕೆ. ಪಾಟೀಲ್ ಮುನಿಯಪ್ಪ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಸದ್ಯ ಆಗಿರುವ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಬೇರೆ ನಿರ್ಧಾರಗಳನ್ನು ಕೈಗೊಳ್ಳದಂತೆ ಮನವಿಯನ್ನು ಮಾಡಿದ್ದಾರೆ. ಇದನ್ನು ಓದಿ :- ವೀರೇಂದ್ರ ಹೆಗ್ಗಡೆ ಸೇರಿ ನಾಲ್ವರು ರಾಜ್ಯಸಭೆಗೆ ಆಯ್ಕೆ- ಮೋದಿ ಅಭಿನಂದನೆ