ವಿಜಯನಗರ: ಜಿಲ್ಲೆಯ ಕೊಟ್ಟೂರು ತಾಲೂಕಿನ ಕಂದಗಲ್ಲ ಗ್ರಾಮದ ಬಳಿ ಇರುವ ಮುರಾರ್ಜಿ ದೇಸಾಯಿ ಶಾಲೆಯ ಮೂವತ್ತೆರೆಡು ವಿದ್ಯಾರ್ಥಿಗಳಿಗೆ ಕೊರೋನಾ ಸೊಂಕು ದೃಢಪಟ್ಟಿದೆ.
ಒಟ್ಟು 176 ವಿದ್ಯಾರ್ಥಿಗಳಿರುವ ಶಾಲೆಯಲ್ಲಿ, ಪಿ.ಯು.ಸಿ ವಿಭಾಗದ 23 ವಿದ್ಯಾರ್ಥಿಗಳಿಗೆ ಹಾಗೂ 9 ವಿದ್ಯಾರ್ಥಿಗಳಿಗೆ ಕೊರೋನಾ ಸೊಂಕು ತಗುಲಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಶಾಲೆಯ ಖಾಲಿ ಇರುವ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈಗಾಗಲೇ ಎಲ್ಲ ವಿದ್ಯಾರ್ಥಿಗಳ ಸ್ವ್ಯಾಬ್ ಸ್ಯಾಂಪಲ್ ತೆಗೆದುಕೊಂಡಿದ್ದು, ಕೊರೋನಾ ರಿಪೋರ್ಟ್ ನಿರೀಕ್ಷೆಯಲ್ಲಿದ್ದಾರೆ. ಸೊಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.