ಮಂಗಳೂರಿನಲ್ಲಿ ಮುಸ್ಲಿಂ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಉತ್ತಮ ಪ್ರತಿಕ್ರಿಯೆ

ಹಿಜಾಬ್ ಧಾರಣೆಗೆ ಅವಕಾಶ ಇಲ್ಲ ಎನ್ನುವ ಕರ್ನಾಟಕ ಹೈಕೋರ್ಟ್ ಆದೇಶ ವಿರೋಧಿಸಿ ಮುಸ್ಲಿಂ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದರು ಪ್ರದೇಶ, ಸೆಂಟ್ರಲ್ ಮಾರ್ಕೆಟ್, ಸ್ಟೇಟ್ ಬ್ಯಾಂಕ್, ಎಪಿಎಂಸಿ ಮಾರ್ಕೆಟ್ ಸೇರಿದಂತೆ ವ್ಯಾಪಾರ ವಹಿವಾಟು ಹೆಚ್ಚಾಗಿ ನಡೆಯುವ ಪ್ರದೇಶಗಳಲ್ಲಿ ಜನಸಂಚಾರ ವಿರಳವಾಗಿತ್ತು.
ಮಂಗಳೂರಿನಲ್ಲಿ ಮೀನು ಮತ್ತು ತರಕಾರಿ ವ್ಯಾಪಾರ ಮಾಡುವ ಬಹುತೇಕರು ಮುಸ್ಲಿಮರೇ ಆಗಿದ್ದಾರೆ. ಇವರೆಲ್ಲರೂ ಬಂದ್ಗೆ ಬೆಂಬಲ ವ್ಯಕ್ತಪಡಿಸಿ ಬಾಗಿಲು ಹಾಕಿದ್ದರಿಂದ ನೀರಸ ವಾತಾವರಣ ನಿರ್ಮಾಣವಾಗಿತ್ತು. ದೈನಂದಿನ ಅಗತ್ಯ ವಸ್ತುಗಳಾದ ಮೀನು ಮತ್ತು ತರಕಾರಿ ಖರೀದಿಸಲು ಸಾಧ್ಯವಾಗದೆ ಜನರು ಪರದಾಡಿದರು. ಚಿಕನ್ ಮಟನ್ ಸ್ಟಾಲ್ ಗಳು ಬಾಗಿಲು ಮುಚ್ಚಿದ್ದವು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!