ಕನ್ನಡಪ್ರೇಮಿಯೊಬ್ಬರು ವರ್ಷಾನುಗಟ್ಟಲೆ ಕಷ್ಟಪಟ್ಟು ಸಂಗ್ರಹಿಸಿದ್ದ 11 ಸಾವಿರ ಪುಸ್ತಕಗಳಿಗೆ ದುಷ್ಕರ್ಮಿಗಳು ಕೊಳ್ಳಿ ಇಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ರಾಜೀವ್ ನಗರದಲ್ಲಿದ್ದ ಕನ್ನಡ ಪ್ರೇಮಿ ಸಯ್ಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸಯ್ಯದ್ ಇಸಾಕ್ ಅವರ 11 ಸಾವಿರ ಪುಸ್ತಕಗಳು ಸುಟ್ಟು ಭಸ್ಮ ಆಗಿದೆ.
ಅಪ್ಪಟ ಕನ್ನಡ ಪ್ರೇಮಿಯಾಗಿದ್ದ ಸಯ್ಯದ್ ಇಸಾಕ್, ಚರಂಡಿ ಸ್ವಚ್ಚತೆ, ಮ್ಯಾನ್‌ಹೋಲ್ ಶುದ್ದಿ ಮಾಡುವ ಕೆಲಸ ಮಾಡಿಕೊಂಡಿದ್ದು, 2011ರಲ್ಲಿ ತನ್ನ ಉಳಿತಾಯದ ಹಣದಲ್ಲಿ ಗುಡಿಸಲಿನಲ್ಲಿ ಗ್ರಂಥಾಲಯ ನಿರ್ಮಿಸಿದ್ದರು.
ಮೈಸೂರಿನಲ್ಲಿ ಅಪಾರ ಜನಮೆಚ್ಚುಗೆಗೆ ಪಾತ್ರವಾಗಿದ್ದ ಕನ್ನಡ ಗ್ರಂಥಾಲಯಕ್ಕೆ ಶುಕ್ರವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಇಟ್ಟು ಪರಾರಿಯಾಗಿದ್ದಾರೆ.
ತನಗೆ ಅಕ್ಷರ ಜ್ಞಾನ ಇಲ್ಲದಿದ್ದರೆ ಇತರರಿಗೆ ಅಕ್ಷರ ಜ್ಞಾನರ್ಜಗೆ ಅನುಕೂಲ ಆಗಲಿ ಎಂಬ ಕಾರಣಕ್ಕೆ ಇಸಾಕ್ ತಾವು ದುಡಿದ ಹಣದಲ್ಲಿ ಗ್ರಂಥಾಲಯ ಸ್ಥಾಪಿಸಿದ್ದರು. ಭಗವದ್ಗೀತೆ, ಕುರಾನ್, ಬೈಬಲ್ ಸೇರಿದಂತೆ ಅಪಾರ ಹಾಗೂ ಅಮೂಲ್ಯವಾದ ಕನ್ನಡ ಪುಸ್ತಕಗಳ ಸಂಗ್ರಹವನ್ನು ಸಯ್ಯದ್ ಹೊಂದಿದ್ದರು.