ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಒಂದೇ ದಿನದಲ್ಲಿ 2,685 ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ.
ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 84,739ಕ್ಕೇರಿಕೆ ಆಗಿದ್ದು, ಒಂದೇ ದಿನ 1,605 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಒಟ್ಟಾರೆ ಗುಣಮುಖಿತರ ಸಂಖ್ಯೆ 68,950ಕ್ಕೆ ಜಿಗಿತ ಕಂಡಿದೆ.
ನಗರದಲ್ಲಿ ಒಟ್ಟಾರೆ 1234 ಮಂದಿ ಸಾವಿಗೀಡಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 14,555ಕ್ಕೆ ಏರಿಕೆ ಆಗಿದೆ.