ಮೈಸೂರು: ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆಯಲ್ಲಿರುವ ಆದಿಚುಂಚನಗಿರಿ ಶಾಖಾಮಠದ ಶಿವಾನಂದ ಸ್ವಾಮೀಜಿ (63) ನಿಧನರಾಗಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮುಂಜಾನೆ ವಿಧಿವಶರಾಗಿದ್ದಾರೆ.