ಮೈಸೂರು : ಮೈಸೂರು ವಿಶ್ವವಿದ್ಯಾಲಯದಿಂದ ನಡೆಯುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
9 ನೇ ಫೆಬ್ರವರಿ 2021 ರಿಂದ ಮಾರ್ಚ್ 7 ರ ವರೆಗೆ ಆನ್ ಲೈನ್ ಅರ್ಜಿ ಸಲ್ಲಿಸಬಹದು. 250 ರೂ. ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸವವರು ದಿ.13-03- 2021 ವರೆಗೆ ಸಲ್ಲಿಸಬಹುದಾಗಿದೆ. ನೋಂದಣಿ ನಂತರ ಬ್ಯಾಂಕ್ ಚಲನ್ ಪ್ರತಿ ತೆಗೆದುಕೊಂಡು ಪರೀಕ್ಷಾ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಯಾವುದೇ ಶಾಖೆಯಲ್ಲಿ ಪಾವತಿಸಿದ ಎರಡು ದಿನಗಳ ನಂತರ ಅಭ್ಯರ್ಥಿಗಳು ಅರ್ಜಿಯನ್ನು ಮತ್ತು ಇತರ ಪ್ರತಿಗಳಾದ ಹಾಜರಾತಿ ಪತ್ರ ಹಾಗೂ ಪ್ರವೇಶಪತ್ರವನ್ನು ಜಾಲತಾಣದಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪ್ರವೇಶಪತ್ರ ಇಟ್ಟುಕೊಂಡು, ಅರ್ಜಿಯ ಪ್ರತಿ, ಹಾಜರಾತಿ ಪತ್ರ, ಜಾತಿ ಪ್ರಮಾಣಪತ್ರ, ಎಸ್ಸೆಸ್ಸೆಲ್ಸಿ ಹಾಗೂ ಸ್ನಾತಕೋತ್ತರ ಪದವಿಯ ಅಂಕಪಟ್ಟಿ ಪ್ರತಿಯನ್ನು ಎ4 ಅಳತೆಯ ಲಕೋಟೆಯಲ್ಲಿ ‘ಕೆ-ಎಸ್‌ಇಟಿ ಉಪನ್ಯಾಸಕರ ಅರ್ಹತಾ ಪರೀಕ್ಷೆ-2021 ಎಂದು ನಮೂದಿಸಿ, ಅಭ್ಯರ್ಥಿಯು ಆಯ್ಕೆ ಮಾಡಿಕೊಂಡ ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿಗೆ ಮಾರ್ಚ್ 15 ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.