ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಬರ್ಬರ ಹತ್ಯೆ

ಮೈಸೂರು : ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಬರ್ಬವಾಗಿ ಹತ್ಯೆಗೈದ ಘಟನೆ ಭಾನುವಾರ ಮೈಸೂರಿನಲ್ಲಿ ನಡೆದಿದೆ.
ನಗರದ ಎಲೆ ತೋಟದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಹತ್ಯೆಯಲ್ಲಿ ಮೃತಪಟ್ಟವರನ್ನು ಮೈಸೂರಿನ ಗೌರಿಶಂಕರನಗರ ನಿವಾಸಿಗಳಾದ ಕಿರಣ್ (29) ಮತ್ತು ಕಿಶನ್ (29) ಎಂದು ಗುರುತಿಸಲಾಗಿದೆ.
ಭಾನುವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಹಲ್ಲೆಯಿಂದ ಓರ್ವ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಡಿಸಿಪಿ ಎ.ಎನ್.ಪ್ರಕಾಶ್ ಗೌಡ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆ.ಆರ್.ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.