ಬ್ಲ್ಯಾಕ್ ಫಂಗಸ್ ನಿಂದಾಗಿ ಗುರುತಿಸಿಕೊಂಡಿದ್ದ ಒಬ್ಬ ಸೇರಿದಂತೆ ಇಬ್ಬರು ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆ ನೌಕರರು ಬಲಿಯಾಗಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆ ನೌಕರರಾಗಿದ್ದ ವಿನೋದ್ (28) ಮತ್ತು ರವಿ (38) ಮೃತ ದುರ್ದೈವಿಗಳು.
ಕೋವಿಡ್ ಮೃತ ದೇಹ ಸಾಗಿಸುವ ವಾಹನದ ಚಾಲಕರಾಗಿದ್ದ ರವಿಗೆ 16 ದಿನದ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೋವಿಡ್ ನಂತರ ಕಾಣಿಸಿಕೊಂಡ ಬ್ಲ್ಯಾಕ್ ಫಂಗಸ್ ಗೆ ಶಸ್ತ್ರಚಿಕಿತ್ಸೆ ಸಹ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವಿನೋದ್ ಫಾಗಿಂಗ್ ವಾಹನದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೂರು ದಿನದ ಹಿಂದೆ ಸೋಂಕು ಧೃಡವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.