ಮೈಸೂರಿನಲ್ಲಿ ದಸರಾ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 15ರಂದು ಜಂಬೂಸವಾರಿ ನಡೆಯಲಿದ್ದು, ಈ ಬಾರಿ ಅರಮನೆ ಮೈದಾನದಲ್ಲಿ 9 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.
ಅಕ್ಟೋಬರ್ 7ರಂದು ಚಾಮುಂಡೇಶ್ವರಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದು, ಅಕ್ಟೋಬರ್ 15ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿ ಚಾಮುಂಡೇಶ್ವರಿ ದರ್ಶನ ಸಾರ್ವಜನಿಕರಿಗೆ ನೀಡಲಾಗುವುದು ಎಂದು ಅವರು ವಿವರಿಸಿದರು.