ಮೈಸೂರು: ಏಣಿಯಿಂದ ಬಿದ್ದು ಗಾಯಗೊಂಡಿದ್ದ ಪೇಂಟರ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಆಟೋದಲ್ಲಿ ಮೃತಪಟ್ಟ ದಾರುಣ ಘಟನೆ ಮೈಸೂರಿನಲ್ಲಿ ಸಂಭವಿಸಿದೆ.
ಕೆ.ಆರ್. ನಗರ ತಾಲೂಕಿನ ಮಿರ್ಲೆ ಗ್ರಾಮದ ನಿವಾಸಿ ಶ್ರೀಕಾಂತ್ (34) ಮೃತ ದುರ್ದೈವಿ
ಮನೆಗೆ ಬಣ್ಣ ಹೊಡೆಯುವ ಕೆಲಸ ಮಾಡುತ್ತಿದ್ದ ಶ್ರೀಕಾಂತ್ ಬೆಳಗೊಳದ ಬಳಿ ಮನೆಗೆ ಬಣ್ಣ ಹೊಡೆಯುವಾಗ ಏಣಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೈ ಸೇರಿ ದೇಹದ ಹಲವು ಕಡೆ ಗಂಭೀರ ಸ್ವರೂಪದ ಗಾಯವಾಗಿದ್ದರಿಂದ ಮೈಸೂರಿನ ಆಸ್ಪತ್ರೆಗೆ ಸೇರಿಸಲು ಆಟೋದಲ್ಲಿ ಕರೆ ತರಲಾಗಿತ್ತು. ಆದರೆ ಸಾಕಷ್ಟು ಆಸ್ಪತ್ರೆಗಳಿಗೆ ಅಲೆದಾಡಿದರೂ ಬೆಡ್ ಸಿಗದೇ ಶ್ರೀಕಾಂತ್ ಮೃತಪಟ್ಟಿದ್ದಾರೆ.