ತಾಯಿ ಹಾಗೂ ಮಗು ಚಿರತೆ ಕಿಡಿಗೇಡಿಗಳು ಹಾಕಿದ ವಿಷಾಹಾರ ಸೇವಿಸಿ ಮೃತಪಟ್ಟ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಶುಂಠಿ ಬೆಳೆದಿದ್ದ ಜಮೀನಿನಲ್ಲಿ ಎರಡು ಚಿರತೆಗಳ ಶವಪತ್ತೆಯಾಗಿದೆ.
5 ವರ್ಷದ ಹೆಣ್ಣು ಚಿರತೆ ಮತ್ತು 1 ವರ್ಷದ ಮರಿ ಚಿರತೆ ವಿಷದ ಆಹಾರ ಸೇವಿಸಿ ಸ್ಥಳದಲ್ಲೇ ಮೃತಪಟ್ಟಿದೆ ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದತಾಯಿ ಹಾಗೂ ಮಗು ಚಿರತೆಗಳ ಶವ ಕಡಬೂರು ಗ್ರಾಮದ ರಾಮನಾಯಕ ಎಂಬುವರ ಶುಂಠಿ ಬೆಳೆ ಜಮೀನು ಮತ್ತು ಬಾಳೆ ತೋಟದಲ್ಲಿ ಪತ್ತೆಯಾಗಿವೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.