National Herald Case- ಕಾಂಗ್ರೆಸ್ನಿಂದ ರಾಜಭವನ ಚಲೋ- ಸಿದ್ದರಾಮಯ್ಯ, ಡಿಕೆಶಿ, ಬಿಕೆ ಹರಿಪ್ರಸಾದ್ ಸೇರಿ ಹಲವರು ಪೊಲೀಸ್ ವಶಕ್ಕೆ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ (National Herald Case) ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (Rahul gandhi) ವಿರುದ್ಧ ಇ.ಡಿ ವಿಚಾರಣೆ ವಿರೋಧಿಸಿ ರಾಜಭವನ ಚಲೋ (Rajabhavana chalo) ಹೊರಟ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಪಿಸಿಸಿ (KPCC) ಕಚೇರಿಯಿಂದ ಪಾದಯಾತ್ರೆ ಹೊರಟ ಕಾಂಗ್ರೆಸ್ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್ ಪ್ರೆಸ್ (Indian express) ವೃತ್ತದ ಬಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರತಿಭಟನೆಯಲ್ಲಿ (Congress Protest) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,(Siddaramaiah) ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK.Shivkumar), ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ (BK. hariprasad) ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಈ ವೇಳೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿಕೆ ಹರಿಪ್ರಸಾದ್ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಮುಂದಾಗುತ್ತಿದ್ದಾರೆ ಅನ್ನೋದು ತಿಳಿಯುತ್ತಿದ್ದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಭಟನಾ ಸ್ಥಳದಲ್ಲೇ ಧರಣಿ ಕುಳಿತರು. ಆದರೆ ಪೊಲೀಸರು ಸಿದ್ದರಾಮಯ್ಯ ಸೇರಿದಂತೆ ರಾಜಭವನ ಚಲೋ ಹೊರಟ್ಟಿದ್ದ ಘಟಾನುಘಟಿ ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ : – ವಿಧಾನಸೌಧದಲ್ಲಿ ವಿಧಾನ ಪರಿಷತ್ತಿನ ನೂತನ ಸದಸ್ಯರಿಂದ ಪ್ರಮಾಣವಚನ ಸ್ವೀಕಾರ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!