ರಾಷ್ಟ್ರೀಯ ಕಬಡ್ಡಿ ಆಟಗಾರ ಟಿ. ಗೋಪಾಲ್ ಕೋಲಾರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕಪ್ಪೂರು ಗ್ರಾಮದ ನಿವಾಸಿಯಾಗಿದ್ದ ಟಿ.ಗೋಪಾಲ್ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ತಡರಾತ್ರಿ ಮೃತಪಟ್ಟಿದ್ದಾರೆ.
15 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, 4 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.