ರಾಜ್ಯದಲ್ಲಿ ಕಳೆದ ಒಂದು ದಿನದಲ್ಲಿ 31,830 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದರೆ, ಬೆಂಗಳೂರಿನಲ್ಲಿ 17,550 ಮಂದಿಗೆ ಸೋಂಕು ತಗುಲಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಪ್ರಕಟಿಸಿದ ವರದಿ ಪ್ರಕಾರ ರಾಜ್ಯದಲ್ಲಿ 24 ಗಂಟೆಗಳ ಅವಧಿಯಲ್ಲಿ ಕೊರೊನಾಗೆ 180 ಮಂದಿ ಬಲಿಯಾಗಿದ್ದು, ಬೆಂಗಳೂರಿನಲ್ಲಿ ಈ ಸಂಖ್ಯೆ 97ಕ್ಕೆ ತಲುಪಿದೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 14,00,775ಕ್ಕೆ ಏರಿಕೆಯಾಗಿದ್ದು, ಕೊರೊನಾಗೆ ಬಲಿಯಾದವರ ಸಂಖ್ಯೆ 14,807ಕ್ಕೆ ಜಿಗಿತ ಕಂಡಿದೆ. 10,793 ಮಂದಿ ಸೋಂಕಿತರು ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 3899 ಗುಣಮುಖಿತರಾಗಿದ್ದಾರೆ. 10,84050 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,01,899ಕ್ಕೆ ಜಿಗಿತ ಕಂಡಿದೆ.