ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅಥ್ಲೆಟಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಗೆದ್ದ ಚಾರಿತ್ರಿಕ ಸಾಧನೆ ಮೆರೆದಿದ್ದಾರೆ.
ಶನಿವಾರ ನಡೆದ ಪುರುಷರ ಜಾವೆಲಿನ್ ಎಸೆತ ಫೈನಲ್ ನಲ್ಲಿ ನೀರಜ್ ಚೋಪ್ರಾ ಮೊದಲೆರಡು ಸುತ್ತುಗಳಲ್ಲಿಯೇ ಗರಿಷ್ಠ ಪ್ರದರ್ಶನ ನೀಡಿದರು.
ಮೊದಲ ಪ್ರಯತ್ನದಲ್ಲಿ 87.03 ಮೀ. ದೂರ ಎಸೆತ ನೀರಜ್ ಚೋಪ್ರಾ, ಎರಡನೇ ಪ್ರಯತ್ನದಲ್ಲಿ 87.58 ಮೀ. ಎಸೆತ ದಾಖಲಿಸಿದರು. ಮೂರನೇ ಪ್ರಯತ್ನದಲ್ಲಿ 76.79 ಮೀ. ಹಾಗೂ ನಾಲ್ಕನೇ ಪ್ರಯತ್ನದಲ್ಲಿ ಫೌಲ್ ಆಗಿ ನಿರಾಸೆ ಮೂಡಿಸಿದರು.