ನವದೆಹಲಿ: ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,00,636 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. 2,427 ಮಂದಿ ಸಾವನ್ನಪ್ಪಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,89,09,975ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,89,09,975ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 3,49,186ಕ್ಕೆ ಜಿಗಿತ ಕಂಡಿದೆ.
ಇನ್ನು ದೇಶದಲ್ಲಿ 14,01,609 ಸಕ್ರಿಯ ಪ್ರಕರಣಗಳಿದ್ದು, 2,71,59,180 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,74,399 ಸೋಂಕಿತರು ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ.