ಬೆಂಗಳೂರು : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 16,068 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 364 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 16,068 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 26,69,514ಕ್ಕೆ ಏರಿಕೆಯಾಗಿದೆ. ಇಂದು 364 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 30,895 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 22,316 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 23,58,412ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 2,80,186 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 3,221 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 206 ಸೋಂಕಿತರು ಸಾವನ್ನಪ್ಪಿದ್ದಾರೆ. 1,31,179 ಸಕ್ರಿಯ ಪ್ರಕರಣಗಳಿವೆ.