ನವದೆಹಲಿ: ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.67.334 ಹೊಸದಾಗಿ ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2.67.334 ಕೊರೊನಾ ವೈರಸ್ ಕೇಸ್ಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2.54.96.330ಕ್ಕೆ ಏರಿಕೆಯಾಗಿದೆ. 4529 ಸೋಂಕಿತರು ಸಾವನ್ನಪ್ಪಿದ್ದಾರೆ.
ದೇಶದಲ್ಲಿ ಒಂದೇ ದಿನ 3.89.851 ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ಈ ಮೂಲಕ ಗುಣಮುಖರಾದವರ ಸಂಖ್ಯೆ 2.19.86.363ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 32.26.719 ಸಕ್ರಿಯ ಪ್ರಕರಣಗಳಿವೆ.