ಬೆಂಗಳೂರು: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್ಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 26,811 ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದ್ದು, 530 ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಹೆಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಇಂದು 26,811 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 2,49,9784 ಕ್ಕೆ ಏರಿಕೆಯಾಗಿದೆ. ಇಂದು 530 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 26,929 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 40,741 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 20,62,910ಮಂದಿ ಗುಣಮುಖರಾಗಿ ಡಿಶ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 4,24,381 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 6433 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 285 ಸೋಂಕಿತರು ಸಾವನ್ನಪ್ಪಿದ್ದಾರೆ. 2,07,357 ಸಕ್ರಿಯ ಪ್ರಕರಣಗಳಿವೆ