ಅನೇಕ ತಿಂಗಳುಗಳಿಂದ ಖಾಲಿ ಇದ್ದ ಕರ್ನಾಟಕ ಲೋಕಾಯುಕ್ತ (Karnataka lokhayuktha) ಹುದ್ದೆ ಕೊನೆಗೂ ಭರ್ತಿಯಾಗಿದೆ. ಹಾಲಿ ಉಪ ಉಪಲೋಕಾಯುಕ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ (Bheemanagowda sanganagowda patil) ಅವರನ್ನು ರಾಜ್ಯದ ನೂತನ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ನೂತನ ಲೋಕಾಯುಕ್ತರಾಗಿ ನ್ಯಾ. ಬಿ.ಎಸ್. ಪಾಟೀಲ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನೆರವೇರಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ( Basavaraj Bommai) , ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) , ಗೃಹ ಸಚಿವ ಆರಗ ಜ್ಞಾನೇಂದ್ರ (Araga gnanendra) , ಸಚಿವರಾದ ವಿ. ಸೋಮಣ್ಣ(Somanna) , ಹಾಲಪ್ಪ ಆಚಾರ್ ಮತ್ತು ಶಾಸಕರು ಉಪಸ್ಥಿತರಿದ್ದರು. ಇದನ್ನೂ ಓದಿ : – ನೂತನ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿಎಸ್ ಪಾಟೀಲ್ ನೇಮಕ
ಮಾಜಿ ಸಿಎಂ ಸಿದ್ದರಾಮಯ್ಯ ಶುಭಾಶಯ
ರಾಜ್ಯದ ನೂತನ ಲೋಕಾಯುಕ್ತರಾಗಿ ನೇಮಕಗೊಂಡ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ಇದನ್ನೂ ಓದಿ :- ಸತತ 8ನೇ ಬಾರಿಗೆ ಪರಿಷತ್ ಪ್ರವೇಶಿಸಿದ ಬಸವರಾಜ್ ಹೊರಟ್ಟಿ