ನವದೆಹಲಿ: ಈ ಬಾರಿಯ ಬಜೆಟ್‌ನಲ್ಲಿ ಅಸಂಘಟಿತ ಕಾರ್ಮಿಕ ವಲಯಕ್ಕೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಭದ್ರತೆಯಿಲ್ಲದೆ ದುಡಿಯುವ ವರ್ಗಕ್ಕೆ ಸಚಿವ ನಿರ್ಮಲಾ ಸೀತಾರಾಮನ್ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ.
ಬಜೆಟ್ ನಲ್ಲಿ ಅಸಂಘಟಿತ ಕಾರ್ಮಿಕ ವಲಯಕ್ಕೂ ಪಿಂಚಣಿವ್ಯವಸ್ಥೆ ಜಾರಿಗೊಳಿಸಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಗೆ ಹೆಚ್ಚು ಕ್ರಮ ಕೈಗೊಳ್ಳಲಾಗುವುದು. ದೇಶದಲ್ಲಿ 100 ಸೈನಿಕ ಶಾಲೆಗಳ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಬ್ಯಾಂಕ್ ಠೇವಣಿದಾರ ವಿಮೆಗೆ ಹಣದ ಮೊತ್ತ ಏರಿಕೆ 1 ಲಕ್ಷ ರೂ. ನಿಂದ 5 ಲಕ್ಷ ರೂ. ವರೆಗೆ ಏರಿಕೆ ಮಾಡಲಾಗಿದೆ. 2.8 ಕೋಟಿ ಮನೆಗಳಲ್ಲಿ 6 ವರ್ಷದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಗ್ರಾಹಕರು ಇನ್ನು ಮುಂದೆ ಯಾರಿಂದ ಬೇಕಾದರೂ ವಿದ್ಯುತ್ ಖರೀದಿಸಬಹುದು. ಇದಕ್ಕಾಗಿ ನ್ಯಾಷನಲ್ ಹೈಡ್ರೋಜನ್ ಎನರ್ಜಿ ಮಿಷನ್ ಗೆ ಚಾಲನೆ. 2022 ಕ್ಕೆ ನ್ಯಾಷನಲ್ ಹೈಡ್ರೋಜನ್ ಎನರ್ಜಿ ಮಿಷನ್ ಗೆ ಚಾಲನೆ ನೀಡಲಾಗುವುದು.