ನವದೆಹಲಿ: ನಿನ್ನೆ ನವದೆಹಲಿಯಲ್ಲಿ ನಡೆದ ರೈತರ ಟ್ರಾಕ್ಟರ್ ಪರೇಡ್ ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ನಟ ಮತ್ತು ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಕೆಂಪುಕೋಟೆಯಲ್ಲಿ ಸಿಖ್ಖರ ಧಾರ್ಮಿಕ ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ಕಾರಣಕ್ಕೆ ಮತ್ತು ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ದೀಪ್ ಸಿಧು ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಕೆಂಪು ಕೋಟೆ ಬಳಿ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರಯತರು ನವದೆಹಲಿಯಲ್ಲಿ ಕಳೆದ ನವೆಂಬರ್ ನಿಂದ ಪ್ರತಿಭಟಿಸುತ್ತಿದ್ದಾರೆ. ಇಷ್ಟು ದಿನ ಶಾಂತಯುತವಾಗಿ ನಡೆದಿದ್ದ ಪ್ರತಿಭಟನೆ ನಿನ್ನೆ ಹಿಂಸಾಚಾರಕ್ಕೆ ತಿರುಗಿತ್ತು. ಪಂಜಾಬ್, ಹರಿಯಾಣ, ಉತ್ತರಪ್ರದೇಶ ಮತ್ತು ದೆಹಲಿಯ ರೈತರು ಸಾವಿರಾರು ಸಂಖ್ಯೆಯಲ್ಲಿ ನಿನ್ನೆ ನಡೆದ ಟ್ರ್ಯಾಕ್ಟರ್ ಪರೇಡ್ ನಲ್ಲಿ ಭಾಗವಹಿಸಿದ್ದರು.
0 67 Less than a minute