ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸುನಾಮಿಯೇ ಎದ್ದಿದ್ದು, ಇಂದು ದಾಖಲೆಯ 14,738 ಕೊರೋನಾ ಕೇಸ್ಗಳು ಪತ್ತೆಯಾಗಿವೆ. ಕೊರೋನಾಗೆ 66 ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 10,497 ಸೇರಿದಂತೆ ರಾಜ್ಯಾದ್ಯಂತ 14,738 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದ ಸೋಂಕಿತರ ಸಂಖ್ಯೆ 11,09,650ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಬರೋಬ್ಬರಿ 96,561 ಸಕ್ರಿಯ ಪ್ರಕರಣಗಳಿದ್ದು, 555 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಒಂದೇ ದಿನ 10,497 ಜನರಿಗೆ ಸೋಂಕು ತಗುಲಿದ್ದು, 30 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 71,827 ಸಕ್ರಿಯ ಪ್ರಕರಣಗಳಿವೆ.