ಕೆಲ ತಿಂಗಳಲ್ಲೇ ಮಾಸಿಕ 17 ಕೋಟಿ ಕೋವಿಡ್ ಲಸಿಕೆ ತಯಾರಿ: ಡಿಸಿಎಂ ‌ಅಶ್ವತ್ಥನಾರಾಯಣ

ಬೆಂಗಳೂರು: ಕೋವಿಡ್‌ ಮಹಾಮಾರಿಯಿಂದ ನಮ್ಮ ಜನರನ್ನು ರಕ್ಷಣೆ ಮಾಡಿಕೊಳ್ಳಲು ಭಾರತವು ಲಸಿಕೆ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದ್ದು, ಇನ್ನು ಕೆಲ ತಿಂಗಳಲ್ಲೇ ಮಾಸಿಕ 17 ಕೋಟಿ ಲಸಿಕೆಗಳನ್ನು ಉತ್ಪಾದನೆ ಮಾಡಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ‌ಅಶ್ವತ್ಥನಾರಾಯಣ ಹೇಳಿದರು.

ಕರ್ನಾಟಕ ಆವಿಷ್ಕಾರ ಮತ್ತು ತಂತ್ರಜ್ಞಾನ ಸಂಸ್ಥೆ (KITS) ಮತ್ತು ಇಂಡೋ- ಫ್ರೆಂಚ್‌ ಕೈಗಾರಿಕಾ ಮತ್ತು ವಾಣಿಜ್ಯ ಒಕ್ಕೂಟ (IFCCI) ನಡುವೆ ಏರ್ಪಟ್ಟ ಒಪ್ಪಂದದ ವೇಳೆ ಮಾತನಾಡಿದ ಅವರು, ಸದ್ಯಕ್ಕೆ ಮಾಸಿಕ 7 ಕೋಟಿ ಕೋವಿಡ್‌ ಲಸಿಕೆಯನ್ನು ಉತ್ಪಾದನೆ ಮಾಡುತ್ತಿದೆ. ಇದಕ್ಕೆ ಇನ್ನೂ 10 ಕೋಟಿ ಲಸಿಕೆ ಸೇರಲಿದೆ. ತದ ನಂತರ ಕರ್ನಾಟಕವೂ ಸೇರಿ ದೇಶಾದ್ಯಂತ ಲಸಿಕೆ ಅಭಿಯಾನ ಮತ್ತಷ್ಟು ವೇಗಗೊಳ್ಳಲಿದೆ. ಇದರ ಜತೆ ಮತ್ತಷ್ಟು ಹೊಸ ಲಸಿಕೆಗಳು ಕೂಡ ಬರಲಿವೆ. ಅವು ರಾಜ್ಯಕ್ಕೂ ಲಭ್ಯವಾಗಲಿವೆ ಎಂದರು.

ಕೋವಿಡ್‌ ಮತ್ತಿತರೆ ಜಾಗತಿಕ ಸವಾಲುಗಳ ನಡುವೆಯೂ ಕರ್ನಾಟಕದಲ್ಲಿ ವಿದೇಶಿ ಹೂಡಿಕೆ ಮೇಲ್ಮುಖವಾಗಿಯೇ ಇದೆ. ಅದಕ್ಕೂ ಮೊದಲು, ಅಂದರೆ 2000 ದಿಂದ 2019 ರವರೆಗೆ ರಾಜ್ಯಕ್ಕೆ 49.7 ಶತಕೋಟಿ ಡಾಲರ್‌ ವಿದೇಶಿ ಹೂಡಿಕೆ ಹರಿದುಬಂದಿದೆ. ವಿದೇಶಿ ಹೂಡಿಕೆ ಒಳಹರಿವಿನಲ್ಲಿ ರಾಜ್ಯವು ಮಹಾರಾಷ್ಟ್ರ ಮತ್ತು ನವದೆಹಲಿಯ ನಂತರ ಮೂರನೇ ಅಗ್ರರಾಜ್ಯವಾಗಿದೆ ಎಂದು ತಿಳಿಸಿದರು.

ಕೋವಿಡ್‌ಗೂ ಮೊದಲು ಕರ್ನಾಟಕ ಹೂಡಿಕೆ ಅತ್ಯುತ್ತಮ ತಾಣವಾಗಿತ್ತು. ಅದೇ ರೀತಿ ಕೋವಿಡ್ಡೋತ್ತರ ಕಾಲದಲ್ಲಿಯೂ ಹೂಡಿಕೆಗೆ ಪ್ರಶಸ್ತ್ಯ ನೆಲೆಯಾಗಿದೆ ಎಂದು ಹೇಳಿದರು.

ಮಾಹಿತಿ ತಂತ್ರಜ್ಞಾನ (ಐಟಿ) ಉತ್ಪನ್ನಗಳ ರಫ್ತು ವಹಿವಾಟಿನಲ್ಲಿ ಕರ್ನಾಟಕ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ. ಭಾರತದ ಐಟಿ ರಫ್ತಿಗೆ ಕರ್ನಾಟಕ ಅತಿದೊಡ್ಡ ಕೊಡುಗೆ ಶೇ.40ರಷ್ಟಿ ಇದೆ. ಇದು ತೆಲಂಗಾಣ, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಿಗಿಂತ ಹೆಚ್ಚು ಹಾಗೂ ಅದರಲ್ಲಿ ಕರ್ನಾಟಕ ಮತ್ತಿತರೆ ರಾಜ್ಯಗಳ ನಡುವೆ ಭಾರೀ ಅಂತರವಿದೆ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!