ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 14,366 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 58 ಮಂದಿ ಅಸುನೀಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,97,725ಕ್ಕೆ ಕುಸಿತ ಕಂಡಿದ್ದರೆ, ಪಾಸಿಟಿವಿಟಿ ದರ ಶೇ.13.45ಕ್ಕೆ ಇಳಿದಿದೆ.
ಬೆಂಗಳೂರಿನಲ್ಲಿ ಒಂದೇ ದಿನ 6685 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 8 ಮಂದಿ ಸಾವಿಗೀಡಾಗಿದ್ದಾರೆ.