ಬಪ್ಪನಾಡು ಜಾತ್ರೆಯಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿಲ್ಲ – ಸಾಮರಸ್ಯ ಎತ್ತಿ ಹಿಡಿದ ಬಪ್ಪನಾಡು ಕ್ಷೇತ್ರದ ಆಡಳಿತ ಮಂಡಳಿ

ಬಪ್ಪನಾಡು ದೇವಸ್ಥಾನದ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ವಿಚಾರ ಕುರಿತಂತೆ ಕ್ಷೇತ್ರದ ಆಡಳಿತ ಮಂಡಳಿ ಸಾಮರಸ್ಯವನ್ನು ಎತ್ತಿ ಹಿಡಿದಿದೆ. ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ದೇವಸ್ಥಾನದ ಆಡಳಿತ ಮಂಡಳಿ ಭಾರತದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ. ಕೆಲಸ ಮಾಡಿ ಬದುಕುವುದಕ್ಕೆ ಜಾತಿ ನೋಡಬಾರದು. ಮತಾಂತರ ಮಾಡಿದರೆ ಅವರನ್ನು ಪ್ರಶ್ನೆ ಮಾಡಬಹುದು. ಆದರೆ ಬದುಕಲು ಅಡ್ಡಗಾಲು ಹಾಕುವುದು ಸರಿಯಲ್ಲ ಎಂದು ಹೇಳಿದೆ.

ಯಾರೇ ಆಗಲಿ ವ್ಯಾಪಾರ ಮಾಡಲು ಅಡ್ಡಿ ಮಾಡಬಾರದು. ನಾನು 11 ವರ್ಷ ಕ್ಷೇತ್ರದಲ್ಲಿ ಆಡಳಿತ ಮೊಕ್ತೇಸರನಾಗಿ ಕೆಲಸ ಮಾಡಿದ್ದೇನೆ. ಈ ದೇವಸ್ಥಾನಕ್ಕೆ ಕೈ ಮುಗಿಯಲು ಮುಸ್ಲಿಂ, ಕ್ರೈಸ್ತರು ಬರುತ್ತಾರೆ. ಈ ಪುಣ್ಯ ಕ್ಷೇತ್ರದಲ್ಲಿ ನಾವೇ ಜಗಳ ಎಳೆದು ತರಬಾರದು. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರ 32 ಗ್ರಾಮಗಳಿಗೆ ಸಂಬಂಧಪಟ್ಟ ದೇವಸ್ಥಾನವಾಗಿದೆ. ನಾವೇ ಕಾಲು ಕೆರೆದು ಜಗಳಕ್ಕೆ ಹೋಗಬಾರದು. ಮತಾಂತರ ಮಾಡಿದರೆ ಪ್ರತಿಭಟನೆ ಮಾಡಬಹುದು. ಆದರೆ ಸೌಹಾರ್ದಯುತವಾಗಿ ಬಾಳಲು ಅಡ್ಡಿ ಮಾಡಬಾರದು ಎಂದು ಹೇಳಿದೆ. ಬಪ್ಪಬ್ಯಾರಿ ಎಂಬ ಮುಸಲ್ಮಾನ ವ್ಯಾಪಾರಿ ಕ್ಷೇತ್ರವನ್ನು ಜಿರ್ಣೋದ್ಧಾರ ಮಾಡಿದ ಇತಿಹಾಸವಿದೆ. ಭಕ್ತರು ಕ್ಷೇತ್ರದ ಸೌಹಾರ್ದತೆಗೆ, ಸಾಮರಸ್ಯಕ್ಕೆ ಪ್ರೋತ್ಸಾಹ ನೀಡಬೇಕು ಈ ಕ್ಷೇತ್ರದಲ್ಲಿ ಎಲ್ಲರಿಗೂ ಅವಕಾಶ ನೀಡಬೇಕು ಎಂದು ಹೇಳಿದೆ. ಕೆಲವರು ಸೌಹಾರ್ದತೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಆದರೆ ಆಡಳಿತ ಮಂಡಳಿಗೆ ಆ ಉದ್ದೇಶವಿಲ್ಲ. ಶ್ರೀ ಬಪ್ಪನಾಡು ಕ್ಷೇತ್ರದಲ್ಲಿ ಹಿಂದೂ ಧಾರ್ಮಿಕ ಮುಖಂಡ ಹರಿಕೃಷ್ಣ ಪುನರೂರು ಹೇಳಿದ್ದಾರೆ. ಬ್ಯಾನರ್ ಅಳವಡಿಕೆಯಿಂದ ಬಪ್ಪನಾಡು ದೇವಸ್ಥಾನದ ಆಡಳಿತ ಮಂಡಳಿ ಅಂತರ ಕಾಯ್ದುಕೊಂಡಿದೆ. ಬಪ್ಪನಾಡು ದೇವಸ್ಥಾನದ ವಠಾರದಲ್ಲಿ ಬ್ಯಾನರ್ ಹಾಕುವುದಕ್ಕೆ ಅವಕಾಶ ಇಲ್ಲ. ದೇವಸ್ಥಾನದ ಹೊರಭಾಗದಲ್ಲಿ ಯಾರು ಬ್ಯಾನರ್ ಹಾಕಿದ್ದಾರೆ ಎಂಬುದು ನಮಗೆ ಗೊತ್ತಿಲ್ಲ. ಪ್ರತಿವರ್ಷ ಇಲ್ಲಿ ಮುಸ್ಲಿಮರು ವ್ಯಾಪಾರ ಮಾಡುತ್ತಿದ್ದಾರೆ. ಆದರೆ ಈ ಬಾರಿ ಮುಸ್ಲಿಮರು ಬಂದಿಲ್ಲ. ಇದಕ್ಕೆ ಕಾರಣ ಏನೆಂಬುದು ಗೊತ್ತಿಲ್ಲ. ಇದಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಕಾರಣ‌ವಲ್ಲ. ದೇವಸ್ಥಾನದ ಆಡಳಿತ ಮಂಡಳಿ ಎಂದೂ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿಲ್ಲ.

ಮುಸ್ಲಿಂ ವ್ಯಾಪಾರಿಗಳು ಬಂದರೆ ಹಿಂದೆ ಕಳುಹಿಸೋಲ್ಲ. ಆದರೆ ಅವರಿಗೆ ತೊಂದರೆ ಆದರೆ ದೇವಸ್ಥಾನ ಜವಾಬ್ದಾರಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ದೇವಸ್ಥಾನದ ಆಡಳಿತ ಮಂಡಳಿ ಎಂದೂ ತಾರತಮ್ಯ ಮಾಡೋದಿಲ್ಲ ಎಂದು ಹೇಳಿದ್ದಾರೆ. ಕೆಲವರು ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡಬಾರದು ಎಂದು ಮನವಿ ನೀಡಿದ್ದರು. ಆದರೆ ಈ ವಿಚಾರದಲ್ಲಿ ನಮ್ಮ‌ ನಿರ್ಧಾರವನ್ನು ಅವರಿಗೆ ಸ್ಪಷ್ಟಪಡಿಸಿದ್ದೇವೆ. ದೇವರ ಪಾವಿತ್ರ್ಯತೆಗೆ ಧಕ್ಕೆ ತರುವ ಕೆಲಸವನ್ನು ಯಾರೂ ಮಾಡಬಾರದು. ದೇವಸ್ಥಾನದಲ್ಲಿ ಯಾರೂ ಬೇಕಾದರೂ ವ್ಯಾಪಾರ ಮಾಡಬಹುದು ಎಂದು ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ್ ಶೆಟ್ಟಿ ತಿಳಿಸಿದ್ದಾರೆ.

ಇದನ್ನು ಓದಿ :- ಕರಾವಳಿಯಲ್ಲಿ ಈಗ ವ್ಯಾಪಾರ ಧರ್ಮ ಯುದ್ಧ – ದೇವಸ್ಥಾನದ ಜಾತ್ರೆ ರಥೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್ಕೆ ನಿರ್ಬಂಧ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!