ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಬದಲಿಸುವ ಯಾವುದೇ ಪ್ರಸ್ತಾಪ ಇಲ್ಲ ಎಂದರು.
ರಾಜ್ಯಾಧಕ್ಷರ ಬದಲಾವಣೆಯೂ ಇಲ್ಲ. ಸಿಎಂ ಸ್ಥಾನ ಬದಲಾವಣೆ ಕೂಡ ಇಲ್ಲ. ಅಂತಹ ಯಾವುದೇ ಪ್ರಸ್ತಾಪ ಕೂಡ ಇಲ್ಲ. ಇದು ಕೇವಲ ಕಾಲ್ಪನಿಕ. ಎಂದು ಅರುಣ್ ಸಿಂಗ್ ಹೇಳಿದರು.
ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಿಲ್ಲ..ನಾಯಕತ್ವ ಬದಲಾವಣೆ ಕುರಿತು ಒಂದಿಬ್ಬರು ಮಾತನಾಡುತ್ತಿದ್ದಾರೆ. ಇನ್ನು ಮುಂದೆ ಈ ಬಗ್ಗೆ ಬಹಿರಂಗವಾಗಿ ಯಾರೂ ಮಾತನಾಡಬಾರದು ಎಂದು ಅವರು ವಿವರಿಸಿದರು.
ಏನೇ ಸಮಸ್ಯೆ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು. 16 ಅಥಾವ 17 ರಿಂದ ಮೂರು ದಿನಗಳು ರಾಜ್ಯಕ್ಕೆ ತೆರಳುತ್ತಿದ್ದೇನೆ. ಎಲ್ಲ ನಾಯಕರ ಅಭಿಪ್ರಾಯ ಸಂಗ್ರಹಿಸುತ್ತೇನೆ. ಬೆಂಗಳೂರಿನಲ್ಲಿ ಶಾಸಕಂಗ ಸಭೆ ನಡೆಸುವ ಬಗ್ಗೆ ತಿರ್ಮಾನ ಮಾಡಲಾಗಿದೆ ಎಂದು ಅವರು ನುಡಿದರು.